ಸಿನಿಮೀಯ ರೀತಿಯಲ್ಲಿ ಬಳ್ಳಾರಿ ಜಿಲ್ಳಾಸ್ಪತ್ರೆಯ ವೈದ್ಯನ ಕಿಡ್ನ್ಯಾಪ್‌, ಬೇಡಿಕೆ ಕೇಳಿದ್ರೆ ಶಾಕ್ ಆಗ್ತೀರಾ

Sampriya

ಶನಿವಾರ, 25 ಜನವರಿ 2025 (15:53 IST)
Photo Courtesy X
ಬಳ್ಳಾರಿ: ಸಿನಿಮೀಯ ರೀತಿಯಲ್ಲಿ ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ. ಸುನೀಲ್‌ ಎಂಬುವವರನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿ, 6ಕೋಟಿ ಹಣಕ್ಕೆ ಭೇಡಿಕೆಯಿಟ್ಟಿರುವ ಗಟನೆ ಇಂದು ಮುಂಜಾನೆ ನಡೆದಿದೆ.

ಡಾ.ಸುನೀಲ್ ಅವರನ್ನು ನಗರದ ಸತ್ಯನಾರಾಯಣ ಪೇಟೆ ಬಳಿ ಅಪಹರಣ ಮಾಡಲಾಗಿದೆ.  ಸುನೀಲ್‌ ಮೊಬೈಲ್‌ನಿಂದಲೇ ಅವರ ತಮ್ಮ, ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಗುಪ್ತ ಅವರಿಗೆ ಕರೆ ಮಾಡಿರುವ ಅಪಹರಣಕಾರರು ₹6 ಕೋಟಿಯಷ್ಟು ಹಣ ಮತ್ತು ಚಿನ್ನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಗೊತ್ತಾಗಿದೆ.

ಸದ್ಯ ಪೊಲೀಸರು ಅಪಹರಣಕಾರರ ಜಾಡು ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ನಗರದ ಹಲವೆಡೆ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆಯಲ್ಲಿ ಸುನೀಲ್ ಅವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ಸ್ಥಳ ಪರಿಶೀಲನೆ ನಡೆಸಿದ್ದು, ತನಿಖಾ ತಂಡಕ್ಕೆ ಸಲಹೆ ಸೂಚನೆ ನೀಡಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ