ಪೋಷಕ ನಟ ಸುರೇಶ್ ಮಂಗಳೂರು ಇನ್ನಿಲ್ಲ

ಬುಧವಾರ, 18 ಮೇ 2016 (11:08 IST)
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಪೋಷಕ ನಟ ಸುರೇಶ್ ಮಂಗಳೂರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
 
ಮಂಗಳೂರು ಮೂಲದ ಸುರೇಶ್ ಅವರು ಕೆಲವು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸುರೇಶ್‌ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿ ಬಾರದ ಲೋಕಕ್ಕೆ ತೆರಳಿದ್ದಾರೆ. 
 
ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಸುರೇಶ್ ಮಂಗಳೂರು ಸ್ವಯಂ ನಿವೃತ್ತಿ ಪಡೆದು ನಾಟಕ, ಧಾರಾವಾಹಿ, ಸಿನೆಮಾಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 

ವೆಬ್ದುನಿಯಾವನ್ನು ಓದಿ