ಮಾರಕಾಸ್ತ್ರದಿಂದ ಕೊಚ್ಚಿ ಗ್ರಾ.ಪಂಚಾಯಿತಿ ಅಧ್ಯಕ್ಷನ ಹತ್ಯೆ..!
ಗ್ರಾಮ ಪಂಚಾಯಿತಿ ಅಧ್ಯಕ್ಷನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಪುರ ಗ್ರಾಮದಲ್ಲಿ ನಡೆದಿದೆ. ಮದರಾ ಬಿ. ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಗೌಡಪ್ಪಗೌಡ ಅಫಜಲಪುರ ತಾಲೂಕಿನ ಮದರಿ ಗ್ರಾಮದ ನಿವಾಸಿಯಾಗಿದ್ದು. ಹಳೇ ವೈಷಮ್ಯ ಹಿನ್ನೆಲೆ ಗೌಡಪ್ಪಗೌಡನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ.