ಕೆಜೆ ಜಾರ್ಜ್ ರಾಜೀನಾಮೆ ನೀಡಬೇಕಾಗಿಲ್ಲ ಎಂದ ಎಚ್ ಡಿಕೆ

ಶನಿವಾರ, 28 ಅಕ್ಟೋಬರ್ 2017 (09:47 IST)
ಬೆಂಗಳೂರು: ಡಿವೈಎಸ್ ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ ಐಆರ್ ದಾಖಲಿಸಿದ ಮಾತ್ರಕ್ಕೆ ಸಚಿವ ಕೆಜೆ ಜಾರ್ಜ್ ರಾಜೀನಾಮೆ ನೀಡಬೇಕಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

 
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಜ್ ವಿರುದ್ಧ ಎಫ್ ಐಆರ್ ದಾಖಲಿಸಿರುವುದರಿಂದ ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂದು ವಿಪಕ್ಷ ಬಿಜೆಪಿ ಪಟ್ಟು ಹಿಡಿದಿದೆ. ಆದರೆ ಜೆಡಿಎಸ್ ಕೊಂಚ ಮೃದು ದೋರಣೆ ತಾಳಿದೆ.

ಜಾರ್ಜ್ ವಿರುದ್ಧ ಮಹತ್ವದ ಸಾಕ್ಷ್ಯ ಸಿಕ್ಕರೆ ಅವರು ರಾಜೀನಾಮೆ ಸಲ್ಲಿಸಲಿ. ಎಫ್ ಐಆರ್ ದಾಖಲಾದ ತಕ್ಷಣ ರಾಜೀನಾಮೆ ಸಲ್ಲಿಸಬೇಕಿ ಎಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ