ಕೆ.ಜೆ. ಜಾರ್ಜ್ ರಾಜೀನಾಮೆ ಪಡೆಯದಿರಲು ಸಿಎಂ ನಿರ್ಧಾರ

ಶುಕ್ರವಾರ, 27 ಅಕ್ಟೋಬರ್ 2017 (13:42 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿದ್ದರೂ ಸಚಿವ ಜಾರ್ಜ್ ರಾಜೀನಾಮೆ ಪಡೆಯದಿರಲು ಸಿಎಂ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಆದೇಶದಲ್ಲಿ ಸಚಿವ ಜಾರ್ಜ್ ಹೆಸರಿಲ್ಲ. ಸಿಐಡಿ ಸಲ್ಲಿಸಿದ ಬಿ ರಿಪೋರ್ಟ್ ಬಗ್ಗೆಯೂ ಸುಪ್ರೀಂಕೋರ್ಟ್ ಪ್ರಸ್ತಾಪವೆತ್ತಿಲ್ಲ ಎಂದು ತಿಳಿಸಿದ್ದಾರೆ.
 
ಯಾವುದೇ ಕಾರಣಕ್ಕೂ ಸಚಿವ ಜಾರ್ಜ್ ರಾಜೀನಾಮೆ ಪಡೆಯಲ್ಲ. ರಾಜೀನಾಮೆ ಪಡೆಯುವಂತಹ ಗಂಭೀರ ಆರೋಪಗಳು ಕಾಣುತ್ತಿಲ್ಲ ಎಂದು ಹೇಳಿದ್ದಾರೆ.
 
ಸಚಿವ ಜಾರ್ಜ್ ಸಿಬಿಐ ಮೇಲೆ ಪ್ರಭಾವ ಬೀರುವಂತಹ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿಬಿಐ ಕೇಂದ್ರ ಸರಕಾರದ ಾಧೀನದ್ಲಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಪ್ರಭಾವ ಬೀರುವ ಪ್ರಶ್ನೆಯೇ ಎದುರಾಗುವುದಿಲ್ಲ ಎಂದು ತಿಳಿಸಿದ್ದಾರೆ.
 
ಬಿಜೆಪಿಯವರು ಸಚಿವ ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಆದರೆ, ಅವರು ರಾಜೀನಾಮೆ ನೀಡುವ ಅಗತ್ಯತೆ ನನಗೆ ಕಾಣುವುದಿಲ್ಲ ಎಂದು ತಿಳಿಸಿದ್ದಾರೆ. ಬಿಜೆಪಿ ರಾಜೀನಾಮೆ ಕೇಳುತ್ತಿರುವುದು ಕೇವಲ ರಾಜಕೀಯ ಕಾರಣಕ್ಕಾಗಿ. ಸಚಿವ ಜಾರ್ಜ್ ಗೌರವವನ್ನು ಹಾಳುಮಾಡುವ ಷಡ್ಯಂತ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ