ಡಿವೈಎಸ್ಪಿ ಗಣಪತಿ ಸಾವಿನ ಪ್ರಕರಣವನ್ನ ಸುಪ್ರೀಂಕೋರ್ಟ್ ಸಿಬಿಐ ತನಿಖೆ ನಡೆಸುವಂತೆ ಆದೇಶಿಸಿದ ಬೆನ್ನಲ್ಲೇ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆಗೆ ಒತ್ತಾಯ ಕೇಳಿ ಬರುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಾರ್ಜ್ ಸದ್ಯ ರಾಜೀನಾಮೆ ಅಗತ್ಯವಿಲ್ಲ ಎಂದಿದ್ದಾರೆ.
ಮಡಿಕೇರಿ ಕೋರ್ಟ್ ಸಿಐಡಿ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಿದ್ದೇನೆ. ಸಿಐಡಿ ತನಿಖೆ ನಡೆಸಿ ಕೋರ್ಟ್`ಗೆ ಬಿ ರಿಪೋರ್ಟ್ ಸಲ್ಲಿಸಿದೆ. ಇದೀಗ, ಸುಪ್ರೀಂಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿರುವುದನ್ನ ಸ್ವಾಗತಿಸುತ್ತೇನೆ. ಆದರೆ, ಸಿಬಿಐ ತನಿಖೆ ನಡೆಸುತ್ತಿರುವುದರಿಂದ ರಾಜೀನಾಮೆ ಕೊಡಬೇಕಾದ ಅಗತ್ಯವಿಲ್ಲ ಎಂದು ಜಾರ್ಜ್ ಹೇಳಿದ್ದಾರೆ.
ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಒತ್ತಾಯದ ಬಗ್ಗೆ ಪ್ರತಿಕ್ರಿಯಿಸಿದ ಜಾರ್ಜ್, ಯಡಿಯೂರಪ್ಪ ಕೇಳುತ್ತಾರೆ ಅಂತಾ ರಾಜೀನಾಮೆ ಕೊಡುವುದಕ್ಕೆ ಆಗಲ್ಲ. ಅವರ ಮೇಲೂ ಹಲವು ಆರೋಪಗಳಿವೆ. ಹಾಗಂತ ಅವರೇನೂ ರಾಜೀನಾಮೆ ಕೊಟ್ಟಿಲ್ಲ ಎಂದು ಜಾರ್ಜ್ ತಿರುಗೇಟು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ