ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ರಾಮನಗರದಲ್ಲಿ ಮುಖ್ಯಮಂತ್ರಿಗಳು ನಂದಿನಿ ಹಾಲಿನ ದರ ಏರಿಕೆ ಮಾಡುವ ಬಗ್ಗೆ ಹೇಳಿದ್ದರು. ಆದರೆ ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಸದ್ಯಕ್ಕೆ ಪ್ರಸ್ತಾವನೆ ಇಲ್ಲ. ಆದರೆ ದರ ಏರಿಕೆ ಮಾಡಬೇಕೆಂದು ರೈತರ ಬೇಡಿಕೆಯಿದೆ. ಆದರೆ ಸದ್ಯಕ್ಕೆ ದರ ಏರಿಕೆ ಮಾಡುವ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಾರೆ.
ಈಗಾಗಲೇ ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ತತ್ತರಿಸಿದ್ದಾರೆ. ಇದರ ನಡುವೆ ಮತ್ತೊಮ್ಮೆ ಹಾಲಿನ ದರ ಏರಿಕೆ ಮಾಡಲು ಹೊರಟ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಈಗ ಕೆಎಂಎಫ್ ಅಧ್ಯಕ್ಷರ ಹೇಳಿಕೆ ಜನರಿಗೆ ಸ್ವಲ್ಪ ಮಟ್ಟಿಗೆ ನಿರಾಳತೆ ಮೂಡಿಸಲಿದೆ.