ಕೊಡಗು ಬೆಟ್ಟ ಕುಸಿತ

ಭಾನುವಾರ, 24 ಜುಲೈ 2022 (19:19 IST)
ಕೊಡಗು ಜಿಲ್ಲೆಯಲ್ಲಿ ಮಳೆ ಅರ್ಭಟ ಕಡಿಮೆಯಾಗಿದ್ದರೂ ಮಳೆಯ ಅವಾಂತರಗಳು ಮುಂದುವರಿಯುತ್ತಿದೆ. ಬೆಟ್ಟದ ಒಂದು ಭಾಗದ ಸಂಪೂರ್ಣ ಮಣ್ಣು ನೀರಿನೊಂದಿಗೆ ಜರಿದುಕೊಂಡು ಮದೆನಾಡಿನ ಕೊಪ್ಪಡ್ಕ ಸಮೀಪದ ಮೂಲಕ ಜೋಡುಪಾಲದವರೆಗೆ ಕೆಸರು ಮಿಶ್ರಿತ ನೀರು ಹರಿದುಕೊಂಡು ಬಂದಿದೆ. ಇತ್ತೀಚೆಗಷ್ಟೇ ಜಿಲ್ಲೆಯ ಎರಡನೇ ಮೊಣ್ಣಂಗೇರಿ ಸಮೀಪದ ರಾಮಕೊಲ್ಲಿಯಲ್ಲಿ ಎರಡು ಬಾರಿ ಜಲಸ್ಫೋಟ ಸಂಭವಿಸಿತ್ತು. ಮತ್ತೆ ಜಲಸ್ಫೋಟವಾಗಿರುವುದು ಗ್ರಾಮಸ್ಥರ ನಿದ್ದೆಗೆಡಿಸಿದೆ. ಜಿಲ್ಲೆಯಲ್ಲಿ ಜೋರಾಗಿ ಮಳೆಯಾದರೆ ಜಲಸ್ಫೋಟವಾದ ಬೆಟ್ಟಇನ್ನಷ್ಟುಕುಸಿಯುವ ಸಾಧ್ಯತೆ ಇದೆ. ಮಾತ್ರವಲ್ಲ ಹಾಗೆ ಕುಸಿದು ಬಂದ ಮಣ್ಣು ಜೋಡುಪಾಲದ ತನಕ ಬಂದು ರಾಷ್ಟ್ರೀಯ ಹೆದ್ದಾರಿಗೆ ಬೀಳುವ ಸಾಧ್ಯತೆ ಹೆಚ್ಚಿದೆ. ಬೆಟ್ಟಕುಸಿತವಾಗುವ ಮೊದಲು ಬೆಟ್ಟಪ್ರದೇಶದಿಂದ ಜೋರಾದ ಶಬ್ದ ಕೇಳಿ ಬಂದಿದ್ದು, ಗ್ರಾಮದ ಸುತ್ತಮುತ್ತಲಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ