ಕೋಲಾರ ಅಭ್ಯರ್ಥಿ ಮಾಜಿ ಮೇಯರ್ ಪುತ್ರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

Sampriya

ಶನಿವಾರ, 30 ಮಾರ್ಚ್ 2024 (17:06 IST)
Photo Courtesy X
ಬೆಂಗಳೂರು: ಕೆ.ಎಚ್‌. ಮುನಿಯಪ್ಪ ಮತ್ತು ರಮೇಶ್ ಕುಮಾರ್ ಜೊತೆ ಮಾತನಾಡಿದ್ದೇನೆ. ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಎರಡೂ ಬಣಗಳಿಗೂ ಟಿಕೆಟ್ ಕೊಟ್ಟಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಕೋಲಾರ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಪಕ್ಷದಲ್ಲಿ ಶಿಸ್ತು ಬಹಳ ಮುಖ್ಯ. ಯಾರೇ ಶಿಸ್ತು ಉಲ್ಲಂಘಿಸಿದರೂ ಕ್ರಮ ಕೈಗೊಳ್ಳುತ್ತೇವೆ. ಶಿಸ್ತು ಉಲ್ಲಂಘನೆ ಮಾಡಿದವರೆಲ್ಲ ಈಗಾಗಲೇ ಕ್ಷಮೆ ಕೇಳಿದ್ದಾರೆ ಎಂದರು. ‌‌

ಶಾಸಕರು, ಸಚಿವರು ಯಾರೇ ಆದರೂ ಎಲ್ಲರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರಾಗಿ ಕೆಲಸ ಮಾಡಬೇಕು. ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವುದೇ ಮುಖ್ಯ ಎಂದು ಹೇಳಿದರು.

ಕೋಲಾರಕ್ಕೆ ಹೈಕಮಾಂಡ್‌ ಟಿಕೆಟ್‌ ಘೋಷಿಸಿರುವ ಕೆ.ವಿ. ಗೌತಮ್ ಪಕ್ಷದ ಸಾಮಾನ್ಯ ಕಾರ್ಯಕರ್ತ, ಮಾಜಿ ಮೇಯರ್ ಪುತ್ರ. ಹೊಸ ಮುಖ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ