ಕೋಲಾರದ ಗಡಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು ಕಳೆದ ಒಂದು ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಬಲಿಯಾಗಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ನಾಡಗುಮ್ಮನಹಳ್ಳಿ ಗ್ರಾಮದ ಬಳಿ ರೈತನ ಮೇಲೆ ದಾಳಿ ನಡೆಸಿರುವ ಕಾಡಾನೆ ರೈತನನ್ನ ತುಳಿದು ಸಾಯಿಸಿದೆ. ಗ್ರಾಮದ ಭತ್ತೆಪ್ಪ (50) ಎಂಬ ರೈತ ಆನೆ ದಾಳಿಯಿಂದ ಮೃತಪಟ್ಟಿದ್ದು, ನೆಲಗಡಲೆ ಭಿತ್ತನೆ ಮಾಡಿದ ಜಮೀನಿನ ಬಳಿ ಹೋದಾಗ ಕಾಡಾನೆ ದಾಳಿ ನಡೆಸಿದೆ. ಇನ್ನು ಕಳೆದ ಮೂರು ದಿನಗಳ ಹಿಂದಷ್ಟೆ ರೈತ ಮಹಿಳೆಯ ಮೇಲೆ ಕಾಡಾನೆಗಳು ದಾಳಿ ನಡೆಸಿದ ಪರಿಣಾಮ ಆಕೆ ಸಾವನ್ನಪ್ಪಿದ್ದಳು, ಒಂದೇ ವಾರದಲ್ಲಿ ಎರಡನೇ ಪ್ರಕರಣ ಇದಾಗಿದ್ದು ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಗಡಿಯಲ್ಲೇ ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು,