ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಪ್ರಕರಣದ ನಿರ್ವಹಣೆಯಲ್ಲಿ ಸರ್ಕಾರ ವಿಫಲ - ಕೋಟಾ ಶ್ರೀನಿವಾಸ ಪೂಜಾರಿ ಆರೋಪ

ಭಾನುವಾರ, 16 ಡಿಸೆಂಬರ್ 2018 (11:34 IST)
ಮೈಸೂರು : ಮಾರಮ್ಮ ನ ವಿಷ ಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ  ಪ್ರಕರಣ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದಾರೆ.


ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿದ ಪರಿಣಾಮ ಈಗಾಗಲೇ 13 ಭಕ್ತರು ಮೃತಪಟ್ಟಿದ್ದು, 80ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಮೈಸೂರಿನ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ  ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು,’ಸರ್ಕಾರ ಮನಸ್ಸು ಮಾಡಿದ್ದರೆ ಬಹಳ ಜನರ ಜೀವ ಉಳಿಸಬಹುದಿತ್ತು. ಅಸ್ವಸ್ಥರನ್ನು ವರ್ಗಾಯಿಸಲು ಆ್ಯಂಬುಲೆನ್ಸ್ ನಲ್ಲಿ ವೆಂಟಿಲೇಟರ್ ಇಲ್ಲ. ವಿಷ ಪೂರಿತ ಆಹಾರ ಲ್ಯಾಬ್ ಗೆ ಕಳುಹಿಸಲು 24 ಗಂಟೆ ಬೇಕಾಗಿತ್ತಾ? ಎಂದು ಸರ್ಕಾರವನ್ನು ಪ್ರಶ್ನಿಸುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ