ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಲಾಕ್ ಡೌನ್ ಮಾಡಲು ಕೋಟಾ ಶ್ರೀನಿವಾಸ ಪೂಜಾರಿ ನಿರ್ಧಾರ

ಸೋಮವಾರ, 13 ಜುಲೈ 2020 (10:57 IST)
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣ ಲಾಕ್ ಡೌನ್ ಮಾಡಲು ಕೋಟಾ ಶ್ರೀನಿವಾಸ ಪೂಜಾರಿ ಒಲವು ತೋರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಮತ್ತೆ ಲಾಕ್ ಡೌನ್ ಸಾಧ್ಯತೆ ಇದೆ ಎನ್ನಲಾಗಿದೆ . ಸಂಸದರು, ಶಾಸಕರು, ಡಿಸಿ, ಆರೋಗ್ಯಾಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದು, ಹಾಗೂ  ಜಿಲ್ಲಾಡಳಿತ ತಜ್ಞರಿಂದ ಲಾಕ್ ಡೌನ್ ಮಾಡುವ ಅಭಿಪ್ರಾಯ ಸಂಗ್ರಹಿಸಲು  ನಿರ್ಧಾರ ಮಾಡಿದ್ದಾರೆ.   ಸಿಎಂ ಸಭೆಯಲ್ಲಿ ಅಭಿಪ್ರಾಯ ತಿಳಿಸಲು ಜಿಲ್ಲಾಧಿಕಾರಿ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 1419 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. 41 ಮಂದಿ ಕೊರೊನಾದಿಂದ ಸಾವನಪ್ಪಿದ್ದು, 760 ಮಂದಿ ಗುಣಮುಖರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ