ಮಧುಕರ್ ಶೆಟ್ಟಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಕೋಟ ಶ್ರೀನಿವಾಸ ಪೂಜಾರಿ

ಭಾನುವಾರ, 30 ಡಿಸೆಂಬರ್ 2018 (10:57 IST)
ಮಂಗಳೂರು : ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಹೈದರಾಬಾದ್ ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಐಪಿಎಸ್ ಅಧಿಕಾರಿ ಡಾ.ಕೆ. ಮಧುಕರ್ ಶೆಟ್ಟಿ ಅವರ ಪಾರ್ಥಿವ ಶರೀರಕ್ಕೆ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ.


ಐಪಿಎಸ್ ಅಧಿಕಾರಿ ಡಾ.ಕೆ. ಮಧುಕರ್ ಶೆಟ್ಟಿ ಅವರ ಪಾರ್ಥಿವ ಶರೀರ ಶನಿವಾರ ರಾತ್ರಿ ಮಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಉಪ ಪೊಲೀಸ್ ಆಯುಕ್ತ ಚಂದ್ರಶೇಖರ್, ಉಪ ಪೊಲೀಸ್ ಆಯುಕ್ತೆ ಉಮಾ ಪ್ರಶಾಂತ್ ಸೇರಿದಂತೆ ಅನೇಕ ಗಣ್ಯರು ನಮನ ಸಲ್ಲಿಸಿದರು.


ಇದೀಗ ಕೋಟ ಶ್ರೀನಿವಾಸ ಪೂಜಾರಿ ಅವರು ಮಧುಕರ್ ಶೆಟ್ಟಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ಡಾ.ಕೆ. ಮಧುಕರ್ ಶೆಟ್ಟಿ ಅವರು ದಕ್ಷ ಮತ್ತ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ. ಎಲ್ಲರೂ ಬರಬೇಕಿತ್ತು, ದರ್ಶನ ಪಡೆಯಬೇಕಿತ್ತು. ಸಚಿವೆ ಜಯಮಾಲ ಗೈರಿಗೆ ಕಾರಣ ಗೊತ್ತಿಲ್ಲ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ