ಕೋವಿಡ್‌ ರೂಪಾಂತರಿ ಹೆಚ್ಚಾಗುವ ಭೀತಿ

ಭಾನುವಾರ, 13 ಫೆಬ್ರವರಿ 2022 (21:07 IST)
ವಿಶ್ವದಲ್ಲಿ ಕೊರೋನಾ ಮೂರನೇ ಅಲೆ ತೀವ್ರತೆ ಕಡಿಮೆಯಾಗುತ್ತಿದೆ ಆದರೆ ಕೋವಿಡ್‌ ಸೋಂಕು ಇನ್ನೂ ಅಂತ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಮತ್ತೆ ಸೋಂಕು ಹೆಚ್ಚಾಗುವ ಅಪಾಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ವಿಶ್ವ ಸಂಸ್ಥೆಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್‌ ಅವರು, ವಿಶ್ವ ಕೋವಿಡ್‌ ಸೋಂಕಿನಿಂದ ಮುಕ್ತವಾಗಿಲ್ಲ. ಮುಂದಿನ ದಿನಗಳಲ್ಲಿ ಕೋವಿಡ್‌ ನ ರೂಪಾಂತರಿಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದಿದ್ದಾರೆ.
ಭಾರತದಲ್ಲಿ ಕೋವಿಡ್‌ ಪಿಡುಗಿನ ಮೂರನೆ ಅಲೆಯ ತೀವ್ರತೆ ಕ್ರಮೇಣ ಇಳಿಕೆಯಾಗುತ್ತಿದ್ದು. ಕಳೆದ 24 ಗಂಟೆಗಳಲ್ಲಿ 50407 ಕೋವಿಡ್‌ ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇನ್ನು ವಿಶ್ವದ ಹಲವು ರಾಷ್ಟ್ರಗಳು ಕೋವಿಡ್‌ ನಿಂದ ಚೇತರಿಸಿಕೊಳ್ಳುತ್ತಿದ್ದು, ಈವರೆಗೂ ಒಟ್ಟು 40,70,41,806 ಕೊರೋನಾ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ