ಎಂ.ಬಿ.ಪಾಟೀಲ್ ಕೆಪಿಸಿಸಿ ನೂತನ ಅಧ್ಯಕ್ಷ?

ಸೋಮವಾರ, 27 ಮೇ 2019 (17:48 IST)
ರಾಜ್ಯದಲ್ಲಿ ಲೋಕಸಮರ ಫಲಿತಾಂಶದಲ್ಲಿ ಕೈ ಪಡೆ ಹೀನಾಯ ಸೋಲು ಕಂಡಿರುವ ಬೆನ್ನಲ್ಲೆ ರಾಜೀನಾಮೆ ಪರ್ವ ಶುರುವಾಗುವ ಲಕ್ಷಣಗಳು ಕಂಡುಬರುತ್ತಿದೆ.

ಏತನ್ಮಧ್ಯೆ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಗೃಹ ಸಚಿವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿಬರಲಾರಂಭಿಸಿವೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಸಚಿವ ಎಂ.ಬಿ.ಪಾಟೀಲರ ಹೆಸರು ಕೇಳಿಬರುತ್ತಿದೆ. ಈ ವಿಚಾರಕ್ಕೆ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಸಧ್ಯ ದಿನೇಶ್ ಗುಂಡೂರಾವ್ ಅಧ್ಯಕ್ಷರಾಗಿದ್ದಾರೆ. ಅವರೇ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ. ಸುಮ್ಮನೆ ಊಹಾಪೋಹದ ಸುದ್ದಿಗೆ ಉತ್ತರ ಕೊಡಲ್ಲ ಎಂದಿದ್ದಾರೆ.

ಪ್ರಬಲ ಸಮುದಾಯದ ನಾಯಕ ಅಂತ ಹೇಳಿಕೊಳ್ಳಲ್ಲ. ಹಿಂದೆಯೂ ಅವಕಾಶ ಬಂದಿತ್ತು, ನಿರಾಕರಿಸಿದ್ದೆ. ಈಗ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ. ಅಂದ ಮೇಲೆ ಮತ್ತೇಕೆ ಆ ಮಾತು ಎಂದು ಕೇಳಿದ್ರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ