ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತೆ ಮುನ್ನಲೆಗೆ

Krishnaveni K

ಬುಧವಾರ, 16 ಜುಲೈ 2025 (08:50 IST)
ಬೆಂಗಳೂರು: ರಾಜ್ಯದಲ್ಲಿ ಸಚಿವರು, ಶಾಸಕರ ಜೊತೆ ಮ್ಯಾರಥಾನ್ ಮೀಟಿಂಗ್ ನಡೆಸುತ್ತಿರುವ ರಣದೀಪ್ ಸುರ್ಜೇವಾಲ ಮುಂದೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಒತ್ತಡ ಕೇಳಿಬಂದಿದೆ.
 

ಸಿಎಂ ಬದಲಾವಣೆ ಚರ್ಚೆ ತಣ್ಣಗಾದ ಬೆನ್ನಲ್ಲೇ ಈಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಚರ್ಚೆಗೆ ಬಂದಿದೆ. ನಿನ್ನೆ ಸಚಿವರ ಜೊತೆ ರಣದೀಪ್ ಸುರ್ಜೇವಾಲ ಮೀಟಿಂಗ್ ನಡೆಸಿದ್ದರು. ಈ ವೇಳೆ ಸತೀಶ್ ಜಾರಕಿಹೊಳಿಯವರನ್ನೂ ಭೇಟಿ ಮಾಡಿದ್ದರು.

ಈ ವೇಳೆ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಒಬ್ಬರೇ ಹಲವು ಹುದ್ದೆಗಳನ್ನು ಹೊಂದಿರಬಾರದು. ಡಿಕೆ ಶಿವಕುಮಾರ್ ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಹೊಂದಿದ್ದಾರೆ. ಇವೆರಡೂ ಪವರ್ ಫುಲ್ ಹುದ್ದೆಗಳು.

ಹೀಗಾಗಿ ಕೆಪಿಸಿಸಿ ಅಧ್ಯಕ್ಷರ ಹುದ್ದೆಯನ್ನು ಇನ್ನೊಬ್ಬರಿಗೆ ನೀಡಬೇಕು ಎಂದು ರಣದೀಪ್ ಮುಂದೆ ಸತೀಶ್ ಜಾರಕಿಹೊಳಿ ವಾದ ಮಂಡಿಸಿದ್ದಾರೆ. ಪಕ್ಷ ಸಂಘಟನೆ ದೃಷ್ಟಿಯಿಂದ ಒಬ್ಬರಿಗೆ ಒಂದೇ ಹುದ್ದೆಯಿರಬೇಕು ಎಂಬುದು ಸತೀಶ್ ಜಾರಕಿಹೊಳಿ ವಾದವಾಗಿದೆ. ಆದರೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ರಣದೀಪ್ ಸುರ್ಜೇವಾಲ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ