ಡಿಕೆಶಿ ನಿವಾಸದ ಮೇಲೆ ದಾಳಿಗೆ ಬಿಜೆಪಿ ಹೈಕಮಾಂಡ್ ಕುಮ್ಮಕ್ಕು

ಬುಧವಾರ, 2 ಆಗಸ್ಟ್ 2017 (12:48 IST)
ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಸಲಾಗುತ್ತಿದೆ. ಪ್ರಧಾನಿ ಮೋದಿಯಿಂದ ಸೇಡಿನ ರಾಜಕೀಯ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಕಾಂಗ್ರೆಸ್ ಪಕ್ಷದ ಸರಕಾರವಿರುವ ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ನಾಯಕರ ಮಲೆಗಳ ಮೇಲೆ ಐಟಿ, ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ದಾಳಿ ನಡೆಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. 
 
ಸಚಿವ ಶಿವಕುಮಾರ್ ಗ್ರ್ಯಾನೈಟ್ ವಹಿವಾಟು ನಡೆಸುತ್ತಿದ್ದಾರೆ. ವಹಿವಾಟಿನ ಕುರಿತಂತೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದರೆ ನಮ್ಮ ಅಭ್ಯಂತರವಿಲ್ಲ. ಆದರೆ, ಸೇಡಿಗಾಗಿ ಐಟಿ ದಾಳಿ ನಡೆಸುತ್ತಿರುವುದು ಹೇಯ ಕೃತ್ಯ ಎಂದು ಕಿಡಿಕಾರಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಿ ದಾಳಿಗೆ ಆದೇಶ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
 
ಗುಜರಾತ್‌ನ ಕಾಂಗ್ರೆಸ್ ಶಾಸಕರು ರಾಜ್ಯದಲ್ಲಿರುವುದರಿಂದ ಅವರನ್ನು ಖರೀದಿಸಲಾಗದೆ ಅಸಹಾಯಕವಾದ ಬಿಜೆಪಿ ಹೈಕಮಾಂಡ್, ಐಟಿ ದಾಳಿಯ ನೆಪದಲ್ಲಿ ದಾಳಿ ನಡೆಸಿ ಬೆದರಿಸುವ ತಂತ್ರ ಮಾಡಿದೆ. ಆದರೆ, ಇಂತಹ ಗೊಡ್ಡ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ ಎಂದು ಕೆಪಿಸಿಸಿ ಅದ್ಯಕ್ಷ ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ