ದೇಶದಲ್ಲಿ ಅಹಿಷ್ಣುತೆ ವಾತಾವರಣ ಇದೆ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ

ಗುರುವಾರ, 13 ಸೆಪ್ಟಂಬರ್ 2018 (16:01 IST)
ದೇಶದಲ್ಲಿ ಅರಾಜಕತೆ, ಅಸಹಿಷ್ಣುತೆಯ ಭಯದ ವಾತಾವರಣ ಸೃಷ್ಟಿಯಾಗಿದೆ. ದೇಶದ ಇತಿಹಾಸದಲ್ಲೇ ಯುದ್ಧ  ವಿಮಾನ ಖರೀದಿಯಲ್ಲಿ ಅತ್ಯಂತ ಭ್ರಷ್ಟಾಚಾರ ನಡೆದಿದೆ. ಮೋದಿ ನೇತೃತ್ವದ ಸರ್ಕಾರ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪ ಮಾಡಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ರೈತರು, ಶೋಷಿತರು, ಬಡವರು ಭಯದಿಂದ ಬದುಕುತ್ತಿದ್ದಾರೆ. ಬಿಜೆಪಿಯವರು ಅಧಿಕಾರದಲ್ಲಿರಲು ನೈತಿಕತೆ ಇಲ್ಲ. ಅವಶ್ಯ ವಸ್ತುಗಳ ಬೆಲೆ ಏರಿಕೆ ಗಗನಕ್ಕೇರಿದೆ. ರೈತರ, ಸಾಮಾನ್ಯ, ಮಧ್ಯಮ ವರ್ಗದ ಜನರ ಜೀವನ ದುಸ್ತರವಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಮೈತ್ರಿ ಸರ್ಕಾರ ನೂರಕ್ಕೆ ನೂರರಷ್ಟು ಸ್ಥಿರವಾಗಿದೆ. ರಾಜ್ಯ ಸರ್ಕಾರವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಜಾರಕಿ ಹೋಳಿ ಬ್ರದರ್ಸ್ ಅನುಭವಿಗಳು, ಬುದ್ದಿವಂತರು ಅವರು ಕಾಂಗ್ರೆಸ್ ನ ನಿಷ್ಠಾವಂತ ಸದಸ್ಯರಾಗಿದ್ದಾರೆ. ಯಾವುದೇ ಕಾರಣಕ್ಕೂ ಅವರು ಪಕ್ಷ ಬಿಡುವುದಿಲ್ಲ. ಪಕ್ಷವನ್ನು ಇಬ್ಬಾಗ ಮಾಡಲು ಅವರು ಮುಂದಾಗುವುದಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ನ ಯಾವ ಶಾಸಕರೂ ಬಿಜೆಪಿಗೆ ಹೋಗಲ್ಲ. ಬಿಜೆಪಿ ಶಾಸಕರೇ ಅಧಿಕಾರ ಬೇಕಾದರೆ ಕಾಂಗ್ರೆಸ್ ಗೆ ಬರ್ತಾರೆ. ಸರ್ಕಾರ ಬೀಳುತ್ತದೆ ಎನ್ನುವುದು ಬಿಜೆಪಿಯವರ ಕಪೋಲ ಕಲ್ಪಿತ ಮಾತಾಗಿದೆ. ಖಾಲಿ ಇರುವ ಆರು ಸಚಿವ ಸ್ಥಾನವನ್ನ ಸಾಮಾಜಿಕ ನ್ಯಾಯದಡಿ ಎಲ್ಲಾ ವರ್ಗದವರಿಗೆ ನೀಡಲಾಗುತ್ತದೆ ಎಂದು ಈಶ್ವರ ಖಂಡ್ರೆ ಹೇಳಿಕೆ ನೀಡಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ