ಶಾಸಕಿ – ಸಚಿವರ ಕುಕ್ಕರ್ ವಾರ್ ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಎಂಟ್ರಿ

ಗುರುವಾರ, 9 ಜುಲೈ 2020 (19:31 IST)
ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಚಿವ ರಮೇಶ್ ಜಾರಕಿಹೊಳಿ ನಡುವೆ ನಡೆಯುತ್ತಿರುವ ಕುಕ್ಕರ್ ವಾರ್ ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಎಂಟ್ರಿ ಕೊಟ್ಟಿದ್ದಾರೆ.

ಶಾಸಕಿ ಹೆಬ್ಬಾಳ್ಕರ್ ಹಾಗೂ ಸಚಿವ ರಮೇಶ್ ಇಬ್ಬರೂ ದೇವಸ್ಥಾನಕ್ಕೆ ಬಂದು ಆಣೆ ಮಾಡಬೇಕು.

ಯಾರ ದುಡ್ಡಿನಲ್ಲಿ ಯಾರು ಕುಕ್ಕರ್ ಹಂಚಿಕೆ ಮಾಡಿದ್ದಾರೆ ಎನ್ನುವ ವಿಷಯ ಜನರಿಗೆ ತಿಳಿಸಬೇಕು ಎಂದಿದ್ದಾರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ.

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಎಲೆಕ್ಷನ್ ಹಂಚಿರುವ ಕುಕ್ಕರ್ ಗೆ ಹಣ ಕೊಟ್ಟಿದ್ದೇ ನಾನು ಎಂದು ಸಚಿವ ರಮೇಶ್ ಜಾರಕಿಹೊಳಿ ಆರೋಪಿಸಿದ್ದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ