ಮೈತ್ರಿ ಸರ್ಕಾದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೃಷ್ಣ ಭೈರೇಗೌಡ ಆಯ್ಕೆ
ಮಂಗಳವಾರ, 26 ಮಾರ್ಚ್ 2019 (12:16 IST)
ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಚಿವ ಕೃಷ್ಣ ಭೈರೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ.
ಸೀಟು ಹಂಚಿಕೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಪಡೆದುಕೊಂಡ ಜೆಡಿಎಸ್ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ವಿಫಲರಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿದೆ. ಈ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಕೃಷ್ಣ ಬೈರೇಗೌಡ, ಎಂಎಲ್ ಸಿ ಕೆ. ಗೋವಿಂದ್ ರಾಜ್, ಹಾಗೂ ಹಾಲಿ ಸಂಸದ ಮುದ್ದಹನುಮೇಗೌಡ ಹೆಸರು ಪ್ರಸ್ತಾಪದಲ್ಲಿತ್ತು. ಆದರೆ ಮುದ್ದಹನುಮೇಗೌಡ ಈ ಆಫರ್ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.
ನಿನ್ನೆ ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಪರಮೇಶ್ವರ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಹಾಗೂ ನಗರದ ಶಾಸಕರು ಸಭೆ ನಡೆಸಿ ಕೊನೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಮ್ಮತಿಯ ಮೇರೆಗೆ ಸಚಿವ ಕೃಷ್ಣ ಭೈರೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.