ಹಾಸನ ಮೃತ ಕುಟುಂಬದವರಿಗೆ ನಷ್ಟ ಭರಿಸಲಂತೂ ನಮ್ಮಿಂದಾಗಲ್ಲ ಕೃಷ್ಣಭೈರೇಗೌಡ ಶಾಕಿಂಗ್ ಹೇಳಿಕೆ
ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ಯಾಂಕರ್ ಹರಿದು 9 ಮಂದಿ ಸಾವನ್ನಪ್ಪಿದ್ದರು. ಘಟನಾ ಸ್ಥಳಕ್ಕೆ ತೆರಳಿರುವ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಇದೊಂದು ಹೃದಯ ವಿದ್ರಾವಕ ಘಟನೆ. ಮೃತರ ಕುಟುಂಬಸ್ಥರಿಗೆ ಸರ್ಕಾರದ ಪರವಾಗಿ ಸಾಂತ್ವನ ಹೇಳಿದ್ದೇನೆ. ತಲಾ 5 ಲಕ್ಷ ರೂ. ಪರಿಹಾರ ನೀಡಲು ಸಿಎಂ ಸೂಚಿಸಿದ್ದಾರೆ. ಇನ್ನೂ ಹೆಚ್ಚಿನ ಪರಿಹಾರ ಕೇಳುತ್ತಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ.
ಮೃತರ ಕುಟುಂಬದವರಿಗೆ ನಷ್ಟ ಭರಿಸಲು ಕೊಡಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಅವರಿಗೆ ಸಹಾಯದ ರೀತಿಯಲ್ಲಿ ಹಣ ಕೊಡುತ್ತಿದ್ದೇವೆ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಅಲ್ಲದೆ ಘಟನೆ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಪೊಲೀಸರಿಗೆ ಆದೇಶಿಸಿದ್ದಾಗಿ ಹೇಳಿದ್ದಾರೆ.