‘ಸಂಜೆಯೊಳಗೆ ಸಿಎಂ ಸಿದ್ದರಾಮಯ್ಯ ಕೊಲೆಯಾಗಬಹುದು!’
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ನ್ಯಾಯಾಮೂರ್ತಿ ವಿಶ್ವನಾಥ್ ಮೇಲೆ ಚೂರಿ ಇರಿತ ಪ್ರಕರಣವನ್ನು ಪ್ರಸ್ತಾಪಿಸಿದ ಈಶ್ವರಪ್ಪ ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎನ್ನುತ್ತಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
‘ಈ ಸಂಜೆಯೊಳಗೆ ಸಿಎಂ ಸಿದ್ದರಾಮಯ್ಯನವರೂ ಕೊಲೆಯಾಗಬಹುದು. ರಾಜ್ಯ ಸರ್ಕಾರದ ಸಚಿವರಿಗೇ ಅವರ ಜೀವಕ್ಕೆ ರಕ್ಷಣೆ ಒದಗಿಸಲು ಸಾಧ್ಯವಾಗದೇ ಹೋಗಬಹುದು. ಹಾಗಾಗಿ ತಮ್ಮಿಂದ ರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರಧಾನ ಮಂತ್ರಿ ಮತ್ತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗೆ ಭದ್ರತೆ ನೀಡಲು ಕೇಳಿಕೊಳ್ಳಲಿ’ ಎಂದು ಈಶ್ವರಪ್ಪ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ.