ಬೆಂಗಳೂರು: ಈ ಬಾರಿ ಪಕ್ಷದ ವಿರುದ್ಧವೇ ಬಂಡಾಯವೆದ್ದು ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ.
ತಮ್ಮ ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭಾ ಟಿಕೆಟ್ ನೀಡದೇ ಇದ್ದಿದ್ದು ಈಶ್ವರಪ್ಪ ಸಿಟ್ಟಿಗೆ ಕಾರಣವಾಗಿತ್ತು. ಈ ಕಾರಣಕ್ಕೆ ಅವರು ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಸಿಡಿದೆದ್ದಿದ್ದರು. ಬಹಿರಂಗವಾಗಿ ಯಡಿಯೂರಪ್ಪ ಮತ್ತು ಮಕ್ಕಳ ಮೇಲೆ ಕಿಡಿ ಕಾರುತ್ತಿದ್ದಾರೆ. ಬಿಜೆಪಿ ಹೈಕಮಾಂಡ್ ನಾಯಕರ ಮನವೊಲಿಕೆಯ ಪ್ರಯತ್ನಕ್ಕೂ ಸೊಪ್ಪು ಹಾಕಿಲ್ಲ.
ಆದರೆ ತಾನು ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಮೋದಿಯನ್ನು ಬೆಂಬಲಿಸುವುದಾಗಿ ಹೇಳಿಕೊಂಡಿದ್ದರು. ಆದರೆ ಇದೀಗ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷಕ್ಕೆ ಮುಜುಗರ ತಂದಿರುವ ಹಿನ್ನಲೆಯಲ್ಲಿ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ತಕ್ಷಣಕ್ಕೆ ಜಾರಿಗೆ ಬರುವಂತೆ ಪಕ್ಷದ ಎಲ್ಲಾ ಜವಾಬ್ಧಾರಿಗಳಿಂದ ಅವರನ್ನು ಮುಕ್ತಿಗೊಳಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ‍್ಯಕ್ಷ ಲಿಂಗರಾಜ ಪಾಟೀಲ್ ನೋಟಿಸ್ ನೀಡಿದ್ದಾರೆ. ನಾಮಪತ್ರ ಹಿಂಪಡೆಯಲು ನಿನ್ನೆ ಕೊನೆಯ ದಿನವಾಗಿತ್ತು. ಕೊನೆಯ ದಿನದವರೆಗೂ ಕಾದು ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.