ಶಿವಮೊಗ್ಗ: ಪುತ್ರ ಕಾಂತೇಶ್ ಗೆ ಟಕೆಟ್ ಸಿಗದ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ರೊಚ್ಚಿಗೆದ್ದಿರುವ ಹರಿ ಹರ ಬ್ರಹ್ಮಾದಿಗಳು ಬಂದರೂ ನಾನು ಸ್ಪರ್ಧೆ ಮಾಡುವುದು ಖಚಿತ ಎಂದಿದ್ದಾರೆ.
ಹಾವೇರಿಯಲ್ಲಿ ಪುತ್ರ ಕಾಂತೇಶ್ ಗೆ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಕೆಎಸ್ ಈಶ್ವರಪ್ಪ ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಅಸಮಾಧಾನಗೊಂಡಿರುವ ಈಶ್ವರಪ್ಪ ಮನವೊಲಿಕೆಗೆ ಬಿಜೆಪಿ ನಾಯಕರು ಪ್ರಯತ್ನ ನಡೆಸುತ್ತಲೇ ಇದ್ದಾರೆ.
ಆದರೆ ಇದು ಯಾವುದಕ್ಕೂ ಸೊಪ್ಪು ಹಾಕಲ್ಲ. ಹರಿಹರ ಬ್ರಹ್ಮಾದಿಗಳು ಬಂದರೂ ನಾನು ಸ್ಪರ್ಧೆ ಮಾಡುವುದು ಖಚಿತ ಎಂದಿದ್ದಾರೆ. ಅಷ್ಟೇ ಅಲ್ಲ, ನಾಮಪತ್ರ ಸಲ್ಲಿಕೆಗೂ ದಿನಾಂಕ ನಿಗದಿಪಡಿಸಿಕೊಂಡಿದ್ದಾರಂತೆ. ಏಪ್ರಿಲ್ 12 ರಂದು ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.
ಶಿವಮೊಗ್ಗದಲ್ಲಿ ಬಿಜೆಪಿ ಬಿವೈ ರಾಘವೇಂದ್ರರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಿದೆ. ಆದರೆ ಈಶ್ವರಪ್ಪ ಸ್ಪರ್ಧಿಸಿದರೆ ಮತ ವಿಭಜನೆಯಾಗಲಿದೆ. ಇದರಿಂದ ಈಶ್ವರಪ್ಪ ಸೋಲುತ್ತಾರೋ, ಗೆಲ್ಲುತ್ತಾರೋ ಬಿಜೆಪಿ ಅಭ್ಯರ್ಥಿ ಗೆಲುವಿಗೆ ತೊಂದರೆಯಾಗಲಿದೆ. ಹೀಗಾಗಿ ಬಿಜೆಪಿಗೆ ಈಶ್ವರಪ್ಪ ತಲೆನೋವಾಗಿದ್ದಾರೆ.