ಸಿದ್ದರಾಮಯ್ಯರ ವಿರುದ್ಧ ಕಿಡಿಕಾರಿದ ಸಚಿವ ಕೆ.ಎಸ್.ಈಶ್ವರಪ್ಪ
ಶನಿವಾರ, 19 ಡಿಸೆಂಬರ್ 2020 (11:32 IST)
ಬೆಂಗಳೂರು : ಸಿದ್ದರಾಮಯ್ಯ ಸೋಲಿಗೆ ಒಳಸಂಚು ಕಾರಣವೆಂಬ ಹೇಳಿಕೆಗೆ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದ ಸೋಲಿನ ಬಗ್ಗೆ ಮಾತಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಇನ್ನೂ ಹಲವರು ನಾಯಕರು ಸೋತಿದ್ದಾರೆ. ವಿಧಾನಸಭೆ, ಲೋಕಸಭೆಯಲ್ಲಿ ಸೋತಾಗ ಏಕೆ ಮಾತಾಡಿಲ್ಲ. ಪರಮೇಶ್ವರ್ , ಖರ್ಗೆ ಸೋತಾಗ ಏಕೆ ಚರ್ಚೆಗೆ ಬರಲಿಲ್ಲ. ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಮೇಲೆ ವಿಶ್ವಾಸವಿಲ್ಲ. ಸಿದ್ದರಾಮಯ್ಯ ಗುಂಪುಗಾರಿಕೆಗೆ ಗುದ್ದಲಿ ಪೂಜೆ ಮಾಡಿದ್ದಾರೆ. ಸಿದ್ದರಾಮಯ್ಯರಿಂದಲೇ ಕಾಂಗ್ರೆಸ್ ಪಕ್ಷ ನಿರ್ನಾವಾಗಲಿದೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಗೆ ಪ್ರಬುದ್ಧ ರಾಜಕಾರಣಿಯ ಲಕ್ಷಣ ಇಲ್ಲ. ರಾಜ್ಯದಲ್ಲಿ ದೊಂಬಿ ಹಬ್ಬಿಸಲು ಡಿಕೆ ಹಳ್ಳಿ, ಕೆಜಿ ಹಳ್ಳಿ , ಕೋಡಿಹಳ್ಳಿ ಮೂಲಕ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಿದ್ದಾರೆ. ಸಿದ್ದರಾಮಯ್ಯರನ್ನು ಸೋಲಿಸಿದವರ ಹೆಸರನ್ನು ಹೇಳಲಿ. ಅವರ ಹೆಸರು ಹೇಳಿದರೆ ಇವರ ವಿಷಯ ಬಯಲಾಗುತ್ತದೆ ಎಂದು ಅವರು ಕಿಡಿಕಾರಿದ್ದಾರೆ.