ಪುತ್ತೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಓವರ್ ಸ್ಪೀಡ್ ನಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ.
ಈ ಘಟನೆಯಲ್ಲಿ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.