ಕ್ಷೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮ
ತುಮಕೂರಿನಲ್ಲಿ ಕ್ಷೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ ನಡೆಸಲಾಗ್ತಿದೆ. ಸೆಪ್ಟೆಂಬರ್ 6ನೇ ತಾರೀಖು, ಮಧುಗಿರಿರಾಜೀವ್ ಗಾಂಧೀ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಇಂದು ಸಚಿವರು ಸ್ಥಳ ಪರಿಶೀಲನೆ ನಡೆಸಿದ್ರು. ಸಿಎಂ ಸಿದ್ದರಾಮಯ್ಯನವರು ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆಯಿದ್ದು ಖುದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ ಸ್ಥಳ ಪರಿಶೀಲನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಕಾರ್ಯಕ್ರಮದ ಸಿದ್ಧತೆ ಕುರಿತು ಮಾಹಿತಿ ಪಡೆದ್ರು.