ಈಗ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯವು ಆಫ್ ಲೈನ್ ಪರೀಕ್ಷೆ ನಡೆಸುವುದರಿಂದ ಅಕಾಡೆಮಿಕ್ ವರ್ಷದಲ್ಲಿ ವಿಳಂಭವಾಗುತ್ತದೆ. ಇದರಿಂದಾಗಿ ಈಗ ಮೂರು ವರ್ಷದ ಕಾನೂನು ಕೋರ್ಸ್ ನ್ನು ನಾಲ್ಕು ವರ್ಷಕ್ಕೆ, ಐದು ವರ್ಷದ ಕೋರ್ಸ್ ನ್ನು ಆರು ವರ್ಷಕ್ಕೆ ಮುಗಿಸಬೇಕಾಗುತ್ತದೆ, ಇದರಿಂದ ತಮ್ಮ ಭವಿಷ್ಯವು ಡೋಲಾಯಮಾನವಾಗುತ್ತದೆ ಎಂದು ವಿದ್ಯಾರ್ಥಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
ಈಗ ಹುಬ್ಬಳ್ಳಿಯ ವಿಶ್ವವಿದ್ಯಾನಿಲಯದಲ್ಲಿನ ಆವರಣದಲ್ಲಷ್ಟೇ ಅಲ್ಲದೆ ಬೆಂಗಳೂರು ಮತ್ತು ರಾಜ್ಯದ ಇತರ ಜಿಲ್ಲಾ ಕೇಂದ್ರಗಳಲ್ಲಿಯೂ ಕೂಡ ವಿಶ್ವವಿದ್ಯಾನಿಲಯದ ಕುಲಪತಿಗಳ ಈ ಧೋರಣೆಯನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಕಾನೂನು ವಿವಿಯ ವಿದ್ಯಾರ್ಥಿಗಳ ಹೋರಾಟಕ್ಕೆ ಈಗ ಎನ್‌ಎಸ್ಯುಐ ಹಾಗೂ ಎಬಿವಿಪಿ ವಿದ್ಯಾರ್ಥಿ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.