ಕೆಎಸ್ ಆರ್ ಟಿಸಿ, ಬಿಎಂಟಿಸಿ ಪ್ರಯಾಣಿಕರಿಗೆ ಕಾದಿದೆ ದೊಡ್ಡ ಶಾಕ್!

ಗುರುವಾರ, 19 ಜುಲೈ 2018 (09:44 IST)
ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ಬಸ್ ಪ್ರಯಾಣ ದರವನ್ನೂ ಏರಿಕೆ ಮಾಡಲು ಚಿಂತನೆ ನಡೆಸಿದೆ.

ಉಚಿತ ಪಾಸ್ ಮತ್ತು ಇಂಧನ ದರ ಏರಿಕೆಯಿಂದಾಗಿ ನಷ್ಟ ಅನುಭವಿಸುತ್ತಿರುವ ಸಾರಿಗೆ ಇಲಾಖೆ ಅದನ್ನು ಸರಿದೂಗಿಸಲು ಬಸ್ ಪ್ರಯಾಣ ದರ ಏರಿಕೆ ಮಾಡಲು ಚಿಂತನೆ ನಡೆಸಿದೆ. ಬಸ್ ಪ್ರಯಾಣ ದರವನ್ನು ಶೇ.20 ರಷ್ಟು ಹೆಚ್ಚಿಸಲು ಸಾರಿಗೆ ನಿಗಮಗಳು ಸರ್ಕಾರಕ್ಕೆ ಮನವಿ ಮಾಡಿದೆ.

ಈಗಾಗಲೇ ವಿದ್ಯಾರ್ಥಿಗಳ ಉಚಿತ ಪಾಸ್ ರದ್ದುಗೊಳಿಸಲಾಗಿದ್ದು, ಇದರ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಈಗ ಬಸ್ ದರ ಏರಿಕೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆಯಾದರೂ, ಇದರ ಬಗ್ಗೆ ಮುಖ್ಯಮಂತ್ರಿಗಳು ಏನೂ ತೀರ್ಮಾನ ಕೈಗೊಂಡಿಲ್ಲ. ಹಾಗಿದ್ದರೂ ದರ ಏರಿಕೆ ಖಡಾ ಖಂಡಿತ ಎಂದೇ ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ