ಮೆಟ್ರೋ ಪಿಲ್ಲರ್ಗೆ KSRTC ಬಸ್ ಡಿಕ್ಕಿ
ಬೆಂಗಳೂರಿನ ಕೆಂಗೇರಿಯ ಭಾರತ್ ಪೆಟ್ರೋಲ್ ಬಂಕ್ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೆಟ್ರೋ ಪಿಲ್ಲರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ 45 ಜನರ ಪೈಕಿ 29 ಜನರಿಗೆ ಗಾಯವಾಗಿದೆ. ಕೆಎಸ್ಆರ್ಟಿಸಿ ಬಸ್ ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿತ್ತು.. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ 4 ಅಡಿ ತಡೆಗೋಡೆಗೆ ಗುದ್ದಿದ ನಂತರ ಪೂರ್ಣಿಮಾ ಪ್ಯಾಲೇಸ್ ಬಳಿ ಇರುವ ಮೆಟ್ರೋ ಪಿಲ್ಲರ್ ನಂ. 545ಗೆ ಬಸ್ ಡಿಕ್ಕಿ ಹೊಡೆದಿದೆ...ಗಾಯಗೊಂಡ 29 ಪ್ರಯಾಣಿಕರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ..ಘಟನಾ ಸ್ಥಳಕ್ಕೆ ಕೆಂಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.