ಕಾರ್ಮಿಕರ ಉಚಿತ ಬಸ್ ಪಾಸ್ ವಿಸ್ತರಣೆ

ಮಂಗಳವಾರ, 14 ಡಿಸೆಂಬರ್ 2021 (14:45 IST)
ಕಟ್ಟಡ ಕಾರ್ಮಿಕರಿಗೆ ಶೀಘ್ರ ಉಚಿತ ಬಸ್‌ ಪಾಸ್ ವ್ಯವಸ್ಥೆಯನ್ನು ಕಾರ್ಮಿಕ ಇಲಾಖೆ ಕಲ್ಪಿಸಲಿದೆ.
 
ಕೋವಿಡ್ 1 ಮತ್ತು 2ನೇ ಅಲೆ ವೇಳೆ ಸಹಾಯಧನ, ಆಹಾರಕಿಟ್, ಲಸಿಕೆ, ತಮ್ಮೂರುಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಮಾಡಿದ್ದ ಇಲಾಖೆಯು ಇದೀಗ ಕಾರ್ಮಿಕರು ತಮ್ಮ ಕೆಲಸದ ಪ್ರದೇಶಗಳಿಗೆ ತೆರಳಲು ಅನುವಾಗುವಂತೆ ಉಚಿತ ಸಾರಿಗೆ ಸೇವೆ ಒದಗಿಸಲು ಮುಂದಾಗಿದೆ.ಬೆಂಗಳೂರಿನಲ್ಲಿ ಈಗಾಗಲೇ ಈ ಉಚಿತ ಸೇವೆಯನ್ನು ಜಾರಿ ಮಾಡಿರುವ ಕಾರ್ಮಿಕ ಇಲಾಖೆಯ ಕಲ್ಯಾಣ ಮಂಡಳಿಯು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ.
 
ಕಾರ್ಮಿಕ ಕಲ್ಯಾಣ ಮಂಡಳಿಯ ನೊಂದಾಯಿತ ಕಾರ್ಮಿಕರು ಈ ಯೋಜನೆ ಲಾಭ ಪಡೆಯಬಹುದಾಗಿದೆ ಎಂದು ಇಲಾಖೆ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ