ದೀಪಾವಳಿ ಹಬ್ಬದ ಪ್ರಯುಕ್ತ KSRTCಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

ಶನಿವಾರ, 14 ಅಕ್ಟೋಬರ್ 2017 (15:19 IST)
ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಯಾಣಿಕರ ಅನುಕೂಲಕ್ಕಾಗಿ ಅ.17 ರಿಂದ 19ರವರೆಗೆ ಬೆಂಗಳೂರಿನಿಂದ ಹೆಚ್ಚುವರಿಯಾಗಿ ರಾಜ್ಯದ ವಿವಿಧ ಭಾಗಗಳಿಗೆ 1300 ರಿಂದ 1500 ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಕಡೆಗೆ, ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ ಹೊರಡಲಿವೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗೆ ಮುಂಗಡ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ಇನ್ನು ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಅ.22ರಂದು ವಿಶೇಷ ಸಾರಿಗೆ ವ್ಯವಸ್ಥೆ ಮಾಡುವುದಾಗಿ ಇಲಾಖೆ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ