ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು? ಯಾರು ಯಾರಿಗೆ ಕೇಡು ಬಗೆದರು? ಎಂದು ಆತ್ಮವಂಚನೆ ಇಲ್ಲದೇ ಹೇಳುವಿರಾ? ನಮ್ಮ ಸಹವಾಸ ಮಾಡಿ ಎಂದು ಸಿದ್ದರಾಮಯ್ಯ ಅವರನ್ನು ಬೇಡಿದ್ದು ಯಾರು? ಅವರ ಮನೆ ಬಾಗಿಲಿಗೆ ಹೋಗಿದ್ದು ಯಾರು? ಸಹಕಾರ ಕೊಟ್ಟವರು ಯಾರು?ಪ್ರಕೃತಿ ಚಿಕಿತ್ಸೆಯಲ್ಲಿ ಕೂತು ಕತ್ತಿ ಮಸಿದಿದ್ದು ಯಾರು?ದಿನಕ್ಕೊಬ್ಬರ ಮೂಲಕ ನನ್ನನ್ನು ಟೀಕಿಸಿದ್ದು ಯಾರು ಎಂದು ಎಂದು ಪ್ರಶ್ನಿಸಿದ್ದಾರೆ.
ಹಾಗೇ ಮತ್ತೊಂದು ಟ್ವೀಟ್ ಮಾಡಿ, ಲೋಕಸಭೆ ಚುನಾವಣೆಯಲ್ಲಿ ನೀವು ಕೊಟ್ಟ ಸಹಕಾರ ಎಂಥದ್ದು? ಸರ್ಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು? ಈ ಯಾರು ಎಂಬ ಪ್ರಶ್ನೆಗೆ ನೀವು ಪ್ರಾಮಾಣಿಕವಾಗಿ ಉತ್ತರಿಸುವಿರಾ? ನೀವು ಕೊಟ್ಟ ಸಹಕಾರಕ್ಕೆ ಬೆಂಬಲಕ್ಕೆ ನಾನು ಋಣಿ. ಈ ಜನ್ಮದಲ್ಲಿ ನಾನು ಮರೆಯಲಾರೆ. ನಿಮ್ಮ ಸಹವಾಸ ನಮಗೂ ಬೇಡ ಎಂದು ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ.