ಡಾ ಸಿಎನ್ ಮಂಜುನಾಥ್ ಸೋಲಿಸಲು ಸೀರೆ ಕುಕ್ಕರ್ ಹಂಚುತ್ತಿರುವ ಕಾಂಗ್ರೆಸ್: ಕುಮಾರಸ್ವಾಮಿ ಆರೋಪ

Krishnaveni K

ಮಂಗಳವಾರ, 19 ಮಾರ್ಚ್ 2024 (14:50 IST)
Photo Courtesy: Twitter
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಜಯದೇವ ಮಾಜಿ ನಿರ್ದೇಶಕ, ಹೃದ್ರೋಗ ತಜ್ಞ ಡಾ. ಸಿಎನ್ ಮಂಜುನಾಥ್ ಸೋಲಿಸಲು ಕಾಂಗ್ರೆಸ್ ವಾಮ ಮಾರ್ಗಕ್ಕಿಳಿದಿದೆ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಈ ಬಾರಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ. ಇಲ್ಲಿ ಪಾರದರ್ಶಕವಾಗಿ ಚುನಾವಣೆ ನಡೆಯಬೇಕೆಂದರೆ ಕೇಂದ್ರ ಪ್ಯಾರಾ ಮಿಲಿಟರಿ ಫೋರ್ಸ್ ಕಳುಹಿಸಬೇಕು ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಹೃದಯ ಚಿಕಿತ್ಸೆಗಾಗಿ ಚೆನ್ನೈಗೆ ತೆರಳುವ ಮೊದಲು ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ ಸಿಎನ್ ಮಂಜುನಾಥ್ ಅವರನ್ನು ಕಣಕ್ಕಿಳಿಸಲಾಗಿದೆ. ಅವರಿಗೆ ಎದುರಾಳಿಯಾಗಿ ಕಾಂಗ್ರೆಸ್ ನಿಂದ ಡಿಕೆ ಸುರೇಶ್ ಕಣಕ್ಕಿಳಿದಿದ್ದಾರೆ. ಅವರು ಬೆಂ. ಗ್ರಾಮಾಂತರ ಪ್ರದೇಶದ ಹಾಲಿ ಸಂಸದ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹೋದರನೂ ಹೌದು.

ಹೀಗಾಗಿ ಇಲ್ಲಿ ಗೆಲ್ಲುವುದು ಕಾಂಗ್ರೆಸ್ ಗೆ ಪ್ರತಿಷ್ಠೆಯ ವಿಚಾರವಾಗಿದೆ. ಇಲ್ಲಿ ಕಳಂಕರಹಿತ ಡಾ ಸಿಎನ್ ಮಂಜುನಾಥ್ ಗೆ ಟಿಕೆಟ್ ನೀಡಿರುವುದು ಕಾಂಗ್ರೆಸ್ ಗೆ ತಲೆನೋವಾಗಿದೆ. ಹೀಗಾಗಿ ಗೆಲುವಿಗೆ ಶತ ಪ್ರಯತ್ನ ನಡೆಸುತ್ತಿದೆ. ಈ ನಡುವೆ ಇಲ್ಲಿ ಈಗಾಗಲೇ ಕಾಂಗ್ರೆಸ್ ಜನರಿಗೆ ಸೀರೆ, ಕುಕ್ಕರ್ ಹಂಚಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಜೊತೆಗೆ ತೋಳ್ಬಲ, ಹಣ ಬಲದ ಪ್ರಭಾವದಿಂದ ಇಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ ಎನ್ನುವ ಪರಿಸ್ತಿತಿಯಿದೆ ಎಂದು ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ