ಸರ್ಕಾರದ ವಿರುದ್ಧ ಕುಮಾರಸ್ವಾಮಿ ಹೊಸ ಬಾಂಬ್

ಭಾನುವಾರ, 11 ಜೂನ್ 2023 (12:47 IST)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಹೌದು. ಸರ್ಕಾರದ ವಿರುದ್ಧ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದು, ಇದೀಗ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹಾಗಾದರೆ ಮುಖ್ಯಮಂತ್ರಿಗಿಂತ ಪವರ್ ಫುಲ್ ಆದ್ರಾ ಆ ಮಿನಿಸ್ಟರ್ ಎಂಬ ಪ್ರಶ್ನೆ ಎದ್ದಿದೆ. 

ಸರ್ಕಾರದ ವಿರುದ್ಧ ಕುಮಾರಸ್ವಾಮಿ ವರ್ಗಾವಣೆ ದಂಧೆಯ ಆರೋಪ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಓರ್ವ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದಾರೆ. ಆದರೆ ಸಚಿವರೊಬ್ಬರು ಅಧಿಕಾರ ತೆಗೆದುಕೊಳ್ಳದಂತೆ ಹೇಳಿದ್ದಾರೆ. ಸಿಎಂ ಆದೇಶ ಮಾಡಿದರೂ ಅಧಿಕಾರ ತೆಗೆದುಕೊಳ್ಳಬೇಡಿ ಎಂದಿದ್ದಾರೆ. ಆ ಸಚಿವರು ಸದ್ಯ ವಿದೇಶದಲ್ಲಿ ಇದ್ದಾರೆ ಅಂತ ಕುಮಾರಸ್ವಾಮಿ ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ