ನನ್ನ ಬಳಿ ದಾಖಲೆ ಇದೆ ಎಂದು ಕುಮಾರಸ್ವಾಮಿ ಪೆನ್‍ಡ್ರೈವ್ ಬಾಂಬ್

ಬುಧವಾರ, 5 ಜುಲೈ 2023 (13:31 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಇಂದು ದಾಖಲೆ ಸಮೇತ ಬಂದಿದ್ದಾರೆ.
 
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ನನ್ನ ಬಳಿ ದಾಖಲೆ ಇದೆ ಅಂತಾ ಪೆನ್ ಡ್ರೈವ್ ಪ್ರದರ್ಶನ ಮಾಡಿದ್ದಾರೆ. ಶರ್ಟ್ ಪಾಕೆಟ್ ನಲ್ಲಿ ಪೆನ್ ಡ್ರೈವ್ ಹಿಡಿದುಕೊಂಡು ಬಂದಿರುವ ಕುಮಾರಸ್ವಾಮಿ, ವರ್ಗಾವಣೆ ದಂಧೆಯ ಆಡಿಯೋ ಇದೆ ಎಂದು ಹೇಳುವ ಮೂಲಕ ಮತ್ತೊಂದು ಬಾಂಬ್ ಹಾಕಿದ್ದಾರೆ.

ಏSಖಿ ಟ್ಯಾಕ್ಸ್ ನಾನ್ ಇಟ್ಕೊಂಡಿಲ್ಲ. ತಾಜ್ ವೆಸ್ಟೆಂಡ್ದ್ದು ಬಾಕಿ ಬಿಲ್ ಕಾಂಗ್ರೆಸ್ಗೆ ಕಳಿಸಿದ್ರಾ?. ನಾನೇನು ಬೀದಿಲಿ ಹೋಗುವವನಾ?. 2-3 ಲಕ್ಷ ಖರ್ಚು ಮಾಡುವ ಯೋಗ್ಯತೆ ನನಗಿಲ್ವಾ? ಬ್ಲ್ಯೂಫಿಲ್ಮ್ಂ ಅನ್ನು ಟೆಂಟ್ ನಲ್ಲಿ ತೋರಿಸಿ ಬಂದವನಲ್ಲ ನಾನು ಎಂದು ವಾಗ್ದಾಳಿ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ