ಅಮೇರಿಕಾದಿಂದಲೇ ರಾಜ್ಯ ರಾಜಕೀಯ ನೋಡ್ತಿದ್ದೇನೆ ಎಂದ ಕುಮಾರಸ್ವಾಮಿ

ಸೋಮವಾರ, 1 ಜುಲೈ 2019 (15:50 IST)
ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಕ್ಕೆ ಸಿಎಂ ಕುಮಾರಸ್ವಾಮಿ ವಿದೇಶದಿಂದಲೇ ಪ್ರತಿಕ್ರಿಯೆ ನೀಡಿದ್ದಾರೆ.

ಶಾಸಕ ಆನಂದ್ ಸಿಂಗ್ ಅವರು ಕಂಪ್ಲಿ ಶಾಸಕ ಗಣೇಶ್ ಜತೆಗಿನ ಜಗಳ ಹಾಗೂ ಜಿಂದಾಲ್ ಗೆ ಭೂಮಿ ನೀಡಿರುವ ವಿಷಯದಲ್ಲಿ ಮನನೊಂದು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಶಾಸಕ ಸಿಂಗ್, ರಾಜೀನಾಮೆ ವಿಷಯಕ್ಕೆ ಸಂಬಂಧಿದಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಅಮೇರಿಕಾ ಪ್ರವಾಸದಲ್ಲಿದ್ದರೂ ಎಲ್ಲವನ್ನೂ ಗಮನಿಸುತ್ತಿದ್ದಾರೆ.

ರಾಜ್ಯದ ಎಲ್ಲ ವಿದ್ಯಮಾನಗಳನ್ನು ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಸರಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ನಿರಂತರ ಹಗಲುಗನಸು ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.

ಈ ನಡುವೆ ಮೈತ್ರಿ ಸರಕಾರ ಪತನವಾದರೆ ಸರಕಾರ ರಚನೆಗೆ ಸಿದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ