ಆದಿಚುಂಚನಗಿರಿ ಕ್ಷೇತ್ರಕ್ಕೆ ಕುಮಾರಸ್ವಾಮಿ ಭೇಟಿ

ಭಾನುವಾರ, 30 ಏಪ್ರಿಲ್ 2023 (12:47 IST)
ಮಂಡ್ಯ : ಅಧಿಕಾರಕ್ಕಾಗಿ ಇದೀಗ ದಳಪತಿಗಳು ದೇವರ ಮೊರೆ ಹೋಗಿದ್ದಾರೆ. ಎಚ್.ಡಿ.ದೇವೇಗೌಡ, ಎಚ್.ಡಿ.ರೇವಣ್ಣ ಬಳಿಕ ಇದೀಗ ಕುಮಾರಸ್ವಾಮಿ ಯವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
 
ತಿಂಗಳ ಹಿಂದೆಯಷ್ಟೇ ರೇವಣ್ಣ ಅವರು ತಮ್ಮ ಪತ್ನಿ ಜೊತೆ ಕಾಲಭೈರವೇಶ್ವರನಿಗೆ ಪೂಜೆ ಸಲ್ಲಿಸಿದ್ದರು. ಅಲ್ಲದೆ ಇತ್ತೀಚೆಗೆ ಅಮಾವಾಸ್ಯೆಯಂದು ಹೆಚ್ಡಿಡಿ ಕೂಡ ಪೂಜೆ ಸಲ್ಲಿಸಿದ್ದರು. ಇಂದು (ಭಾನುವಾರ) ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಂದ ಪೂಜೆ ಸಲ್ಲಿಕೆಯಾಗಿದೆ. 

ಈ ಮೂಲಕ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಪದೇ ಪದೇ ಕಾಲಭೈರವೇಶ್ವರನ ಮೊರೆ ಹೊಗುತ್ತಿದ್ದಾರೆ. ಬೆಳಗ್ಗೆ 8.30ಕ್ಕೆ ಆದಿಚುಂಚನಗಿರಿಗೆ ಭೇಟಿ ನೀಡಿದ್ದ ಕುಮಾರಸ್ವಾಮಿ ಜೊತೆ ಮಂಡ್ಯ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳಿಂದಲೂ ಪೂಜೆ ಸಲ್ಲಿಸಿದ್ದಾರೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ