ವಿಧಾನಸೌಧದಲ್ಲಿ ಜಪ್ತಿಯಾಗಿದ್ದ 1.97 ಕೋಟಿ ರೂಪಾಯಿ ಹಣಕ್ಕೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೂ ಯಾವುದೇ ಸಂಬಂಧವಿಲ್ಲ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ವಿಧಾನಸೌಧ ಹಾಗೂ ಬಿಬಿಎಂಪಿ ಕಾಂಗ್ರೆಸ್ ಮತ್ತು ಜೆಡಿಎಸ್ ವಶದಲ್ಲಿದೆ. ಇಲ್ಲಿ ಏನೇ ನಡೆದರು ಇವರಿಬ್ಬರೇ ಕಾರಣ ಎಂದು ಹೇಳಿದರು.
ವಿಧಾನಸೌಧದಲ್ಲಿ ಜಪ್ತಿಯಾಗಿರುವ ಹಣದ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು. ಆಗ ಮಾತ್ರ ಅಕ್ರಮ ದುಡ್ಡು ಯಾರಿಗೆ ಸೇರಿದ್ದು ಎಂದು ತಿಳಿಯುತ್ತದೆ ಎಂದು ಹೇಳಿದರು.
ವಿಧಾನಸೌಧದಲ್ಲಿ ಜಪ್ತಿಯಾಗಿದ್ದ ಹಣ ಯಾರಿಗೆ ಸೇರಿದೆ ಎನ್ನುವುದು ಬಿಎಸ್‌ವೈಗೆ ಸಂಪೂರ್ಣ ಮಾಹಿತಿ ಇದೆ. ಅವರನ್ನು ವಿಚಾರಿಸಿದರೆ ಹಣ ಯಾರಿಗೆ ಸೇರಿದ್ದು ಹಾಗೂ ಹಣ ಏಲ್ಲಿಗೆ ರವಾನೆಯಾಗುತಿತ್ತೆಂದು ತಿಳಿದು ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ