ಜಂತಕಲ್ ಮೈನಿಂಗ್ ಪ್ರಕರಣ: ಕುಮಾರಸ್ವಾಮಿಗೆ ನಿರೀಕ್ಷಣಾ ಜಾಮೀನು ಮಂಜೂರು

ಬುಧವಾರ, 17 ಮೇ 2017 (15:00 IST)
ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
 
ಎಚ್.ಡಿ.ಕುಮಾರಸ್ವಾಮಿಗೆ ಜಾಮೀನು ದೊರೆಯದಿದ್ದಲ್ಲಿ ಅವರ ರಾಜಕೀಯ ಬೆಳವಣಿಗೆಗೆ ಅಡ್ಡಿಯಾಗಲಿದೆ ಎಂದು ಭಾವಿಸಲಾಗಿತ್ತು. ಇದೀಗ ಕೋರ್ಟ್ ತೀರ್ಪಿನಿಂದಾಗಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ದೊರೆತಂತಾಗಿದೆ.
 
ಏಳು ದಿನಗಳೊಳಗಾಗಿ ವಿಶೇಷ ತನಿಖಾ ತಂಡದ ಮುಂದೆ ಹಾಜರಾಗುವಂತೆ ಕೋರ್ಟ್, ಕುಮಾರಸ್ವಾಮಿಗೆ ಆದೇಶ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ