ಎಚ್‌.ಡಿ.ಕುಮಾರಸ್ವಾಮಿಯದ್ದು ಹಿಟ್ ಆಂಡ್ ರನ್ ಕೇಸ್: ಬಿಜೆಪಿ

ಸೋಮವಾರ, 24 ಅಕ್ಟೋಬರ್ 2016 (20:15 IST)
ವಿಧಾನಸೌಧದಲ್ಲಿ ಜಪ್ತಿಯಾಗಿದ್ದ 1.97 ಕೋಟಿ ರೂಪಾಯಿ ಹಣ ಯಾರಿಗೆ ಸೇರಿದೆ ಎನ್ನುವುದು ಬಿಎಸ್‌ವೈಗೆ ಸಂಪೂರ್ಣ ಮಾಹಿತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪವನ್ನು ಬಿಜೆಪಿ ವಕ್ತಾರ ಸುರೇಶ್ ಕುಮಾರ್ ಅಲ್ಲಗಳೆದಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೂಕ್ತ ದಾಖಲೆಗಳಿದ್ದರೆ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಲಿ. ಆದರೆ, ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು. ಕುಮಾರಸ್ವಾಮಿಯದ್ದು ಹಿಟ್ ಆಂಡ್ ರನ್ ಕೇಸ್ ಎಂದು ಹೇಳಿದರು. 
 
ಈ ಹಿಂದೆ ದೆಹಲಿ ಸಿಎಂ ಕೇಜ್ರಿವಾಲ್ ಸಹ ಇದೆ ರೀತಿ ವರ್ತಿಸುತ್ತಿದ್ದರು. ಕೇಜ್ರಿವಾಲ್‌ರ ಪ್ರಭಾವ ಎಚ್‌ಡಿಕೆ ಮೇಲೆ ಬಿದ್ದಿದೆ ಎಂದು ತಿರುಗೇಟು ನೀಡಿದರು. 
 
ವಿಧಾನಸೌಧದಲ್ಲಿ ಜಪ್ತಿಯಾಗಿದ್ದ 1.97 ಕೋಟಿ ರೂಪಾಯಿ ಹಣದ ಕುರಿತು ಸಮಗ್ರ ತನಿಖೆಯಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. ಮಾಜಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿ ಅವರಿಂದ ಇಂತಹ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ ಎಂದು ಬಿಜೆಪಿ ವಕ್ತಾರ ಸುರೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ