ಉಪಚುನಾವಣೆ ಫಲಿತಾಂಶ ಸರ್ಕಾರದ ಸಾಧನೆಯ ತೀರ್ಪಲ್ಲ, ಅಕ್ರಮದ ತೀರ್ಪು: ಎಚ್‌ಡಿಕೆ

ಗುರುವಾರ, 13 ಏಪ್ರಿಲ್ 2017 (16:59 IST)
ಉಪಚುನಾವಣೆ ಫಲಿತಾಂಶ ಸರಕಾರದ ಪರ ತೀರ್ಪಲ್ಲ. ಚುನಾವಣೆಯಲ್ಲಿ ನಡೆಸಿದ ಅಕ್ರಮದ ತೀರ್ಪು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.  
 
ಉಪಚುನಾವಣೆಯಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಅಧಿಕಾರದ ಬಲ, ಹಣಬಲ, ತೋಳ್ಬಲವನ್ನು ಬಳಸಿಕೊಂಡು ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಇಂತಹ ತಂತ್ರಗಳು ನಡೆಯವುದಿಲ್ಲ ಎಂದು ಟಾಂಗ್ ನೀಡಿದ್ದಾರೆ.   
 
ಒಂದು ವೇಳೆ, ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನು ನಿಲ್ಲಿಸಿದ್ದಲ್ಲಿ ಫಲಿತಾಂಶವೇ ಬೇರೆಯಾಗುತ್ತಿತ್ತು. ಜೆಡಿಎಸ್ ಅಭ್ಯರ್ಥಿಯನ್ನು ಹಾಕದಿದ್ದರಿಂದ ಕಾಂಗ್ರೆಸ್ ಪಕ್ಷ ಸುಲಭವಾಗಿ ಗೆಲ್ಲಲು ಸಾಧ್ಯವಾಯಿತು ಎಂದರು. 
 
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿರೋ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಮಾತನಾಡಿದ ಹೆಚ್‍ಡಿಕೆ, ಈ ಒಂದು ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿಯಲ್ಲ. ಸಿಎಂ ಸಿದ್ದರಾಮಯ್ಯ ಈಗ ಭ್ರಮಾಲೋಕದಲ್ಲಿ ತಿರುಗುತ್ತಿದ್ದಾರೆ ಅಂದ್ರು.
 
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲ್ಲುವ ರಣತಂತ್ರ ರೂಪಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ