ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಲವು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಇವರ ವಿರುದ್ಧ ಬಸ್‌ಗೆ ಕಲ್ಲು ತೂರಿದ ಹಾಗೂ ದೊಂಬಿ ಪ್ರಕರಣಗಳು ದಾಖಲಾಗಿವೆ. ಸಿಎಂ ಸಿದ್ದರಾಮಯ್ಯ ಆರೋಪಿ ನಂಬರ್ ಒನ್ ಹಾಗೂ ಸಿಎಂ ಆಪ್ತ ಮರಿಗೌಡ ಆರೋಪಿ ನಂಬರ್ 2 ಆಗಿದ್ದಾರೆ. ಆದರೂ ಸಹ ಇವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಆಪ್ತ ಮರಿಗೌಡ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಆದರೂ ಇವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಮುಖ್ಯಮಂತ್ರಿಯವರು ಹಿಟ್ & ರನ್ ಮಾಡುತ್ತಿದ್ದಾರೆ ಎಂದು ಹೇಳಿದರು.