ಹಣ ವಸೂಲಿ ಬಗ್ಗೆ ಕೇಳಿದ್ರೆ ತಮ್ಮ ಹರಾಮಿ ಬಾಯಿ ತೆಗೆಯುವ ಸಿಎಂ: ಕುಮಾರಸ್ವಾಮಿ

ಸೋಮವಾರ, 26 ಡಿಸೆಂಬರ್ 2016 (14:34 IST)
ಪೊಲೀಸರ ವರ್ಗಾವಣೆಗೆ ಇಂತಿಷ್ಟು ಹಣ ಎಂದು ಫಿಕ್ಸ್ ಮಾಡಿದ್ದಾರೆ. ಯಾಕೆ ಹಣ ವಸೂಲಿ ಮಾಡುತ್ತೀರಾ ಎಂದು ಕೇಳಿದರೆ ಸಿಎಂ ಸಿದ್ದರಾಮಯ್ಯ ತಮ್ಮ ಹರಾಮಿ ಬಾಯಿ ತೆಗೆಯುತ್ತಾರೆ ಎಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಮೊದಲು ನಿಮ್ಮ ಕೊಡುಗೆ ಹೇಳಿ ನಂತರ ನನ್ನನ್ನು ಕೇಳಿ ಎಂದು ಟಾಂಗ್ ನೀಡಿದ ಅವರು ಮುಂಬರುವ 2018ರಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ. 
 
ಮುಂಬರುವ ಮಾರ್ಚ್ ತಿಂಗಳಲ್ಲಿ 120 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿ ಚುನಾವಣೆ ಕಣಕ್ಕೆ ಧುಮುಕುತ್ತೇವೆ. ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಧೂಳಿಪಟ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ರಾಜ್ಯದ ಬಿಜೆಪಿ ನಾಯಕರು ಜನವಿರೋಧಿ, ರೈತ ವಿರೋಧಿಯಾಗಿದ್ದಾರೆ. ಕೇವಲ ಮೋದಿ ಹೆಸರು ಹೇಳಿಕೊಂಡು ರಾಜಕೀಯ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಬಿಜೆಪಿ ನಾಯಕರು ಸ್ವಂತ ಬಲದ ಮೇಲೆ ಚುನಾವಣೆ ಗೆಲ್ಲುವ ಯೋಗ್ಯತೆ ಹೊಂದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ