ಜಮೀರ್ ಅಹ್ಮದ್ ಖಾನ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಮಂಗಳವಾರ, 28 ಫೆಬ್ರವರಿ 2017 (13:57 IST)
ಜೆಡಿಎಸ್ ಪಕ್ಷದಲ್ಲಿರದವರು ಪಕ್ಷದ ಅಥವಾ ನನ್ನ ಬಗ್ಗೆಯಾಗಲಿ ಮಾತನಾಡುವುದನ್ನು ನಿಲ್ಲಿಸಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಬಂಡಾಯ ಶಾಸಕ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಪಕ್ಷದಿಂದ ದೂರವಾಗಿದ್ದಾರೆ. ಅವರಿಗೂ ಜೆಡಿಎಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅಂತಹವರು ನಮ್ಮ  ಪಕ್ಷದ ಬೆಳವಣಿಗೆಗಳ ಬಗ್ಗೆ ಹೇಳಿಕೆ ನೀಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ತಾಕೀತು ಮಾಡಿದರು.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಠೇವಣಿ ಕಳೆದುಕೊಳ್ಳುತ್ತದೆ,ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎನ್ನುವ ಹೇಳಿಕೆಗಳನ್ನು ಖಾನ್ ನೀಡುತ್ತಿರುವುದು ವಿಷಾದದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಗೋಪಾಲಯ್ಯನವರನ್ನು ಮತ್ತೆ ಪಕ್ಷಕ್ಕೆ ಸೇರ್ಪಡೆಗೊಳಿಸಿರುವುದನ್ನು ಸಮರ್ಥಿಸಿಕೊಂಡ ಅವರು, ಅವರಿಗೆ ತಮ್ಮ ತಪ್ಪಿನ ಅರಿವಾಗಿ ಪಶ್ಚಾತಾಪವಾಗಿದ್ದರಿಂದ ಪಕ್ಷಕ್ಕೆ ಸೇರ್ಪಡೆಗೊಳಿಸಲಾಗಿದೆ ಎಂದರು. 
 
ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ವರ್ತನೆಯಿಂದ ರಾಜ್ಯದ ಜನತೆ ಬೇಸತ್ತು ಹೋಗಿದ್ದು, ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ಗೆ ಮಣೆ ಹಾಕುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ