ರಾಜ್ಯದಲ್ಲಿರುವುದು ಕಾಂಗ್ರೆಸ್ ಸರಕಾರವಲ್ಲ, ಕುರುಬರ ಸರಕಾರ: ಜಾಫರ್ ಷರೀಫ್
ಭಾನುವಾರ, 29 ಜನವರಿ 2017 (17:32 IST)
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ನಡೆಸುತ್ತಿದೆ ಎಂದು ನಮಗೆ ಅನಿಸಿಲ್ಲ. ಇದು ಕುರುಬರ ಸರಕಾರ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಮಗೆ ಸ್ಥಾನ ನೀಡದಿದ್ದರು ಪರವಾಗಿಲ್ಲ. ನಮ್ಮನ್ನು ಗೌರವಯುತವಾಗಿ ನಡೆಸಿಕೊಂಡರೆ ಸಾಕು. ಮುಂದಿನ ಚುನಾವಣೆಯಲ್ಲಿ ನಾವು ಎಲ್ಲಿರುತ್ತೇವೆ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಎಚ್ಚರಿಕೆ ನೀಡಿದರು.
ಪಕ್ಷದ ಹಿರಿಯ ನಾಯಕನ್ನು ಕಡೆಗಣಿಸುವುದು ಸರಿಯಲ್ಲ. ನಾವು ಸಾಕಷ್ಟು ನೊಂದಿದ್ದೇವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್ ಬೇಸರ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ ಹಾಗೂ ಮತ್ತಿತ್ತರ ಮುಖಂಡರ ನಡವಳಿಗೆಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಸಮಧಾನಗೊಂಡಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಅವರು, ರಾಜಕೀಯ ಚಟುವಟಿಕೆಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ