ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಕೆ
ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಲಕ್ಷ್ಮಣ್ ಸವದಿ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ಅಥಣಿ ಕ್ಷೇತ್ರದ ತಾಲೂಕು ಕಚೇರಿಯಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ರು.. ಈ ಹಿಂದೆ ಬಿಜೆಪಿ ಅಭ್ಯರ್ಥಿಯಾಗಿದ್ದ ಸವದಿ, ಈ ಬಾರಿ ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷದಿಂದ ಚುನಾವಣಾ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ.