ಬೆಂಗಳೂರು: ಸಚಿವ ಸ್ಥಾನ ತಮಗೆ ನೀಡದೇ ಜಯಮಾಲಾಗೆ ನೀಡಿದ್ದಕ್ಕೆ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದವೊಂದನ್ನು ಹುಟ್ಟುಹಾಕಿದ್ದರು.
ಜಯಮಾಲಾ ಸೇವೆ ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಿರಬಹುದು ಎಂದಿದ್ದರು. ಆದರೆ ಅವರು ಬಳಸಿದ ಸೇವೆ ಪದ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಸ್ವತಃ ಜಯಮಾಲಾ ಕೂಡಾ ಅಸಮಾಧಾನಗೊಂಡಿದ್ದರು.
ಇದೀಗ ಸ್ವತಃ ಲಕ್ಷ್ಮೀ ಹೆಬ್ಬಾಳ್ಕರ್ ಇದಕ್ಕೆ ಸ್ಪಷ್ಟನೆ ನೀಡಿದ್ದು, ಸೇವೆ ಎಂದಿದ್ದು ಉತ್ತರ ಕರ್ನಾಟಕ ಶೈಲಿಯಲ್ಲಿ ಪಕ್ಷದ ಸೇವೆ ಎಂದು. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಅವರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ನನಗೆ ಅಸಮಾಧಾನವಿದೆ. ಆದರೆ ಸೇವೆ ಎಂದಿದ್ದಕ್ಕೆ ವಿಶೇಷ ಅರ್ಥವೇನೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.