ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ:ರಸ್ತೆಯ ತುರ್ತು ರಿಪೇರಿಗೆ ಸಚಿವ ಸಿ.ಸಿ.ಪಾಟೀಲರ ತಾಕೀತು

ಗುರುವಾರ, 21 ಅಕ್ಟೋಬರ್ 2021 (21:29 IST)
ಮೈಸೂರಿನ ಚಾಮುಂಡಿ ಬೆಟ್ಟದ ಒಂದು ಸ್ಥಳದ ಭೂಕುಸಿತ ಉಂಟಾಗಿ ರಸ್ತೆಗೆ ಹಾನಿಗೀಡಾಗಿ ಅಲ್ಲಿ ಸಂಭವಿಸಬಹುದಾದ ಅಪಾಯವನ್ನು ತಪ್ಪಿಸಬೇಕು ಮತ್ತು ತಕ್ಷಣದ ಸ್ಥಳವನ್ನು ಭೇಟಿ ಮಾಡಬೇಕು.
 
ಮೈಸೂರಿನ ಈ ಘಟನೆಯ ಬಗ್ಗೆ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಅವರು
ಈ ವಿಷಯವನ್ನು ಸ್ಪಷ್ಟಪಡಿಸಲಾಗಿದೆ.
 
ಇತ್ತೀಚೆಗೆ ಸುರಿಯುತ್ತಿರುವ ಭಾರೀ ಪ್ರಮಾಣದ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಈ ಭೂಕುಸಿತ ಸಂಭವಿಸಿದೆ. ಈ ಬಗ್ಗೆ ತಾಂತ್ರಿಕ ವರದಿಯನ್ನು ನೀಡುವ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ
 
 ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಲೀ ಅಥವಾ ಹೆಚ್ಚಿನ ಆಸ್ತಿಪಾಸ್ತಿಯಾಗಲೀ ಹಾನಿಯಾಗಿಲ್ಲ ಎಂದು ಸಮಾಧಾನಕರ ಸಂಗತಿಯಾಗಿದೆ. ಆದರೆ ಅಲ್ಲಿ ಮುಂದೆ ಹೆಚ್ಚಿನ ಅವಘಡಗಳಾಗಬಾರದು ಎಂಬ ಮುನ್ನೆಚ್ಚರಿಕೆಯಿಂದ ಅಲ್ಲಿಯ ಬೃಹತ್ ನಂದಿ ಪ್ರತಿಮೆಗೆ ತೆರಳುವ ರಸ್ತೆ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. (ಪ್ರಸ್ತುತ ಚಾಮುಂಡಿ ಬೆಟ್ಟಕ್ಕೆ ತೆರಳುವ ಮುಖ್ಯರಸ್ತೆಯಲ್ಲಿ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ)
 
ಮೈಸೂರಿನ ಜಿಲ್ಲಾಡಳಿತದ ಸೂಕ್ತ ಸಹಕಾರವನ್ನು ಪಡೆದುಕೊಂಡು ಆದ್ಯತೆಯ ಮೇರೆಗೆ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಿ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ