ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

Sampriya

ಗುರುವಾರ, 17 ಜುಲೈ 2025 (19:26 IST)
ನವದೆಹಲಿ: ಬಿಡದಿ ಬಳಿ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣ ಸಂಬಂಧ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. 

ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಮಿಥಲ್ ಹಾಗೂ ನ್ಯಾಯಾಮೂರ್ತಿ.ಪ್ರಸನ್ನ ಬಿ. ವರಾಳೆ ಅವರ ದ್ವಿಸದಸ್ಯ ಪೀಠ, ಮುಂದಿನ ಆದೇಶದವರೆಗೂ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ಮತ್ತು ಅರ್ಜಿದಾರ ಸಮಾಜ ಪರಿವರ್ತನಾ ಸಮುದಾಯಕ್ಕೆ ನೋಟಿಸ್ ಜಾರಿ ಮಾಡಿದೆ.

ಸುಪ್ರೀಂ ಕೋರ್ಟ್, ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪಕ್ಷಕಾರರನ್ನಾಗಿಸುವ ಕರ್ನಾಟಕ ಹೈಕೋರ್ಟ್‌ನ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿದ್ದು, ಈ ಕುರಿತು ಮುಂದಿನ ವಿಚಾರಣೆ ನಡೆಸಲಿದೆ.



 


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ